ಹಿರೋಶಿಮಾ(ಜಪಾನ್): ಜಿ 7 ಶೃಂಗಸಭೆಯಲ್ಲಿ ನಾನು ಭಾಗಿಯಾಗುತ್ತಿರುವುದು ಅರ್ಥಪೂರ್ಣ ಎನಿಸಲಿದೆ ಎಂದು ಪ್ರಧಾನಿ ಮೋದಿಯವರು ಹೇಳಿದ್ದಾರೆ. ಅವರು ಶನಿವಾರ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಇದೇ ಸಂದರ್ಭದಲ್ಲಿ ಹಿರೋಶಿಮಾದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಪ್ರತಿಮೆಯನ್ನು ಅನಾವರಣಗೊಳಿಸಿದ ನಂತರ, ಪ್ರಧಾನಿ ಮೋದಿ ಅವರು ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಪ್ರಧಾನಿ ಮೋದಿ ಅವರಿಗೆ ಜಪಾನಿನ ಅಧ್ಯಕ್ಷರು ಉಡುಗೊರೆಯಾಗಿ ಬೋಧಿ ವೃಕ್ಷವನ್ನು ನೀಡಿದರು. ನನಗೆ ಇದು ಒಂದು ಉತ್ತಮ ಕ್ಷಣವಾಗಿದೆ, ನಾನು ಜಪಾನ್ಗೆ ಬಂದಾಗೆಲ್ಲ ಇಲ್ಲಿಯ ಜನರ ಶಾಂತಿ ಮಹತ್ವವನ್ನು ಅರ್ಥಮಾಡಿಕೊಳ್ಳಬಹುದು. ಜಪನ್ನಲ್ಲಿ ನಾನು ಮಹಾತ್ಮ ಗಾಂಧಿಯವರಿಗೆ ನನ್ನ ಗೌರವವನ್ನು ಸಲ್ಲಿಸಿರುವುದು ಒಂದು ದೊಡ್ಡ ಗೌರವ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.