ಧಾರವಾಡ: ಧಾರವಾಡ ಜಿಲ್ಲೆ ರಾಜ್ಯಕ್ಕೆ ೨೩ ನೇ ಸ್ಥಾನ ಪಡೆದಿದೆ. ಕಳೆದ ಬಾರಿ ಶೇ. ೭೩ರಷ್ಟು ಫಲಿತಾಂಶ ಪಡೆದು ೨೭ನೇ ಸ್ಥಾನಕ್ಕೆ ಕುಸಿದಿತ್ತು. ಈ ಬಾರಿ ಶೇ. ೮೦ರಷ್ಟು ಫಲಿತಾಂಶ ಗಿಟ್ಟಿಸಿಕೊಂಡಿದೆ.
ವಿಜ್ಞಾನ ವಿಭಾಗದಲ್ಲಿ ಜಿಲ್ಲೆಯ ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿನಿ ವಿದ್ಯಾಲಕ್ಷ್ಮೀ ೫೯೮ ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದ್ದಾಳೆ. ಅದೇ ರೀತಿ ಕಲಾ ವಿಭಾಗದಲ್ಲಿ ಧಾರವಾಡ ಕೆ.ಇ. ಬೋರ್ಡ್ ಕಾಲೇಜಿನ ವಿದ್ಯಾರ್ಥಿನಿ ರವಿನಾ ಲಮಾಣಿ ೫೯೫ ಅಂಕ ಪಡೆದು ರಾಜ್ಯಕ್ಕೆ ದ್ವೀತಿಯ ಸ್ಥಾನದಲ್ಲಿದ್ದಾಳೆ. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು.
ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ವಿದ್ಯಾಲಕ್ಷ್ಮಿ598 ಅಂಕ ಪಡೆದು ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ದಕ್ಷಿಣಕನ್ನಡ(97.37%) ಪ್ರಥಮ, ಉಡುಪಿ (96.80%) ದ್ವಿತೀಯ, ವಿಜಯಪುರ (94.89%) ತೃತೀಯ, ಗದಗ (72.86%) ಜಿಲ್ಲೆಗೆ ಕೊನೆಯ ಸ್ಥಾನ.
ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮೀ 600ಕ್ಕೆ 598 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಪಿಯುಸಿ ಕಲಾ ವಿಭಾಗದಲ್ಲಿ ಇಬ್ಬರು ಟಾಪರ್ಗಳಾಗಿದ್ದಾರೆ. ಕಲಾ ವಿಭಾಗದಲ್ಲಿ ಮೇಧಾ ಡಿ. ಟಾಪರ್ 600ಕ್ಕೆ 596 ಅಂಕಗಳನ್ನು ಪಡೆದರೆ, ವಿಜಯಪುರದ ವೇದಾಂತ್ ಕೂಡ 600ಕ್ಕೆ 596 ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ಜ್ಞಾನವಿ 600ಕ್ಕೆ 597 ಅಂಕ ಪಡೆದು ಟಾಪರ್ ಆಗಿದ್ದಾರೆ. 2024 ರ ದ್ವಿತೀಯ ಪಿಯು ಪರೀಕ್ಷೆಗೆ 3.3 ಲಕ್ಷ ಹುಡುಗರು ಮತ್ತು 3.6 ಲಕ್ಷ ಹುಡುಗಿಯರು ಹಾಜರಾಗಿದ್ದರು. ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ ಒಟ್ಟು 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. https://karesults.nic.in ವೆಬ್ ಸೈಟ್‌ನಲ್ಲಿ 11 ಗಂಟೆ ನಂತರ ಫಲಿತಾಂಶ ವೀಕ್ಷಿಸಬಹುದು.