ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಕೂರಿಸಲು ಗ್ರೀನ್ ಸಿಗ್ನಲ್…

Advertisement

ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಹುಬ್ಬಳ್ಳಿ ಮತ್ತು ಧಾರವಾಡ ಮಹಾನಗರ ಪಾಲಿಕೆ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಪಾಲಿಕೆಯ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.

ಹುಬ್ಬಳ್ಳಿ-ಧಾರವಾಡ ಪಾಲಿಕೆ ಈದ್ಗಾ ಮೈದಾನದಲ್ಲಿ ಮೂರು ದಿನ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಿತ್ತು. ಪಾಲಿಕೆ ಪರ-ವಿರೋಧ ಚರ್ಚೆಯ ನಡುವೆ ಸದನ ಸಮಿತಿ ರಚಿಸಿ, ಸಮಿತಿ ವರದಿ ಆಧರಿಸಿ ನಿನ್ನೆ ರಾತ್ರಿ ಅನುಮತಿ ನೀಡಿತ್ತು. ಈ ಹಿನ್ನೆಲೆ ಮುಸ್ಲಿಂ ಮುಖಂಡ ಸಾದಿಕ್ ಗುಡವಾಲಾ ಹೈಕೋರ್ಟ್​ಗೆ ಮೊರೆ ಹೋಗಿದ್ಧಾರೆ. ಇಂದು ಮಧ್ಯಾಹ್ನ 3 ಗಂಟೆ ನಂತರ ಅರ್ಜಿ ವಿಚಾರಣೆ ನಡೆಯಲಿದೆ.