ಬೆಂಗಳೂರು: 2023ನೇ ಆವೃತ್ತಿಯ ಮಹಾರಾಜ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮೈಸೂರ್ ವಾರಿಯರ್ಸ್ ವಿರುದ್ಧ 8ರನ್‌ಗಳ ಗೆಲುವಿನ ಮೂಲಕ ಹುಬ್ಬಳ್ಳಿ ಟೈಗರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿತು.
ಹುಬ್ಬಳ್ಳಿ ಟೈಗರ್ಸ್ ನೀಡಿದ್ದ 204 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಮೈಸೂರ್ ವಾರಿಯರ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 195 ರನ್‌ಗಳಿಸಿ ಸೋಲೊಪ್ಪಿಕೊಂಡಿತು. ಇದಕ್ಕೂ ಮುನ್ನ ಮೊದಲ ಬ್ಯಾಟ್ ಮಾಡಿದ ಹುಬ್ಬಳ್ಳಿ ಟೈಗರ್ಸ್ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 203 ರನ್‌ಗಳಿಸಿತ್ತು.