ಹುಲಿ ಉಗುರು ಪ್ರಕರಣ: ವರ್ತೂರು ಸಂತೋಷ್‌ಗೆ ಜಾಮೀನು

Advertisement

ಬೆಂಗಳೂರು: ಪ್ರಗತಿಪರ ಕೃಷಿಕ ವರ್ತೂರು ಸಂತೋಷ್‌ ಹುಲಿ ಉಗುರಿನ ಪೆಂಡೆಂಟ್‌ ಧರಿಸಿದ್ದ ಆರೋಪದಲ್ಲಿ ಬಂಧಿತರಾಗಿದ್ದ ಅವರಿಗೆ ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯವು ಗುರುವಾರ ಸಂತೋಷ್‌ ಜಾಮೀನು ಅರ್ಜಿ ಮೇಲಿನ ತನ್ನ ತೀರ್ಪನ್ನು ಪ್ರಕಟಿಸಿದ್ದು, ಜಾಮೀನಿನ ಮೂಲಕ ಬಿಡುಗಡೆಗೆ ಅವಕಾಶ ನೀಡಿದೆ. ಬಂದನದ ನಂತರ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದಾಗ ಕೋರ್ಟ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಇಂದು ಜಾಮೀನು ಅರ್ಜಿಯ ವಿಚಾರಣೆಯ ಬಳಿಕ ಈಗ ಜಾಮೀನಿನಡಿ ಬಿಡುಗಡೆಗೆ ಕೋರ್ಟ್‌ ಆದೇಶ ಮಾಡಿದೆ. 4 ಸಾವಿರ ರೂಪಾಯಿ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ಒದಗಿಸುವಂತೆ ನ್ಯಾಯಾಲಯ ಷರತ್ತು ಹಾಕಲಾಗಿದೆ. ಇಂದು ಸಂಜೆ ವೇಳೆಗೆ ವರ್ತೂರು ಸಂತೋಷ್ ಬಿಡುಗಡೆ ಆಗುವ ಸಾಧ್ಯತೆ ಇದೆ.