ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್‌ನ ನೂತನ ಉಪ ಪೊಲೀಸ್ ಆಯುಕ್ತರಾಗಿ(ಕಾನೂನು & ಸುವ್ಯವಸ್ಥೆ) ಕುಶಲ್ ಚೌಕ್ಸೆ ಐಪಿಎಸ್ ಸೋಮವಾರ ಅಧಿಕಾರಿ ಇಂದು ಅಧಿಕಾರ ವಹಿಸಿಕೊಂಡರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಅವರು ನೂತನ ಡಿಸಿಪಿಗೆ ಅಭಿನಂದನೆ ಸಲ್ಲಿಸಿದರು. ಕುಶಲ್ ಚೌಕ್ಸೆ 2018ನೇ ಬ್ಯಾಚ್‍ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದು, ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇವರನ್ನು ಈಗ ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.