ನವದೆಹಲಿ: ಎಎಪಿ 2024 ರ ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ 10 ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ದೇಶಾದ್ಯಂತ 24×7 ವಿದ್ಯುತ್ ಮತ್ತು ಉಚಿತ ವಿದ್ಯುತ್ ಸೇರಿದಂತೆ 10 ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು ಎಂದಿದ್ದಾರೆ. ವಿಶ್ವ ದರ್ಜೆಯ ಸರ್ಕಾರಿ ಶಾಲೆ ಹಾಗೂ ಎಲ್ಲಾ ಮಕ್ಕಳಿಗೆ ಉಚಿತ ಶಿಕ್ಷಣ, ದೇಶದ ಪ್ರತಿ ಜಿಲ್ಲೆಯಲ್ಲೂ ವಿಶ್ವ ದರ್ಜೆಯ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಪ್ರತಿ ಗ್ರಾಮ ಮತ್ತು ಪ್ರದೇಶದಲ್ಲಿ ಮೊಹಲ್ಲಾ ಕ್ಲಿನಿಕ್, ಚೀನಾ ಆಕ್ರಮಿತ ಭೂಮಿ ಪಡೆಯಲು ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ , ರೈತರಿಗೆ ಬೆಳೆಗಳಿಗೆ ಸಂಪೂರ್ಣ ಬೆಲೆ, 1 ವರ್ಷದಲ್ಲಿ 2 ಕೋಟಿ ಉದ್ಯೋಗ, ಜಿಎಸ್‌ಟಿ ತೆರವು ಸೇರಿದಂತೆ 10 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ.