ದೆಹಲಿ: 2020ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜೆಎನ್ಯು ವಿದ್ಯಾರ್ಥಿ ಸಂಘದ ಮಾಜಿ ನಾಯಕ ಉಮರ್ ಖಾಲಿದ್ ಅವರನ್ನು ಇಂದು ದೆಹಲಿ ನ್ಯಾಯಾಲಯ ದೋಷಮುಕ್ತಗೊಳಿಸಿದೆ.
ಉಮರ್ ಖಾಲಿದ್ ಜೊತೆಗೆ ಮತ್ತೊಬ್ಬ ವಿದ್ಯಾರ್ಥಿ ನಾಯಕ ಖಾಲಿದ್ ಸೈಫಿ ಕೂಡ ದೆಹಲಿಯ ಕರ್ಕರ್ಡೂಮಾ ನ್ಯಾಯಾಲಯದಿಂದ ಖುಲಾಸೆಗೊಂಡಿದ್ದಾರೆ.
ದೆಹಲಿಯ ಚಾಂದ್ಬಾಗ್ನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಇಬ್ಬರಿಗೂ ಜಾಮೀನು ಸಿಕ್ಕಿತ್ತು, ಆದರೆ ಪ್ರತ್ಯೇಕ ಪ್ರಕರಣದಲ್ಲಿ ಜೈಲು ಸೇರಿದ್ದರು.