2047ರ ಹೊತ್ತಿಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ವಾಗ್ದಾನ ಮಾಡಿದ್ದಾರೆ.
ಗುಜರಾತ್ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 2001ರ ಭೀಕರ ಭೂಕಂಪದ ನಂತರ ಜಿಲ್ಲೆಯನ್ನು ಅಭಿವೃದ್ಧಿ ಪಡಿಸುವುದಾಗಿ ಭರವಸೆ ನೀಡಿದ್ದೆ. ಈಗ ಅದು ಎಷ್ಟು ಅಭಿವೃದ್ಧಿಯಾಗಿದೆ ಎಂಬುದನ್ನು ನೀವೇ ನೋಡಿ. ಇಂದು ಭಾರತವನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ಭರವಸೆ ನೀಡುತ್ತಿದ್ದೇನೆ. 2047ರ ಹೊತ್ತಿಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ. ಅದು ಖಂಡಿತವಾಗಿಯೂ ಸಾಧ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.