21, 22ರಂದು ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ

Advertisement

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಸಾಂಸ್ಕೃತಿಕ ಮಹೋತ್ಸವ ಹಾಗೂ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ಜ.೨೧ ಹಾಗೂ ೨೨ ರಂದು ಜೆ.ಕೆ. ಶಾಲೆ ಮಾರ್ಗದಲ್ಲಿರುವ ವೆಂಕಟರಮಣ ದೇವಸ್ಥಾನ ಮುಂಭಾಗದಲ್ಲಿರುವ ೨೦ ಎಕರೆ ಜಮೀನಿನಲ್ಲಿ, ಅಂತಾರಾಷ್ಟ್ರೀಯ ಗಾಳಿಪಟ ಹಾಗೂ ಸಾಂಸ್ಕೃತಿಕ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಕ್ಷಮತಾ ಸೇವಾ ಸಂಸ್ಥೆ ಸಂಚಾಲಕ ಗೋವಿಂದ ಜೋಶಿ ಹೇಳಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕು ವರ್ಷಗಳಿಂದ ಗಾಳಿಪಟ ಉತ್ಸವ ಮಾಡಲಾಗುತ್ತಿದೆ. ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಗಾಳಿಪಟದ ಉತ್ಸವದಲ್ಲಿ ಲಂಡನ್, ಇಂಗ್ಲೆಂಡ್, ಅಮೇರಿಕಾ, ಫ್ರಾನ್ಸ್ ಸೇರಿದಂತೆ ೧೫ ದೇಶದ ೨೫ ಸ್ಪರ್ಧಿಗಳು ಭಾಗವಹಿಸಲಿದ್ದಾರೆ ಎಂದರು. ಜ. ೨೧ರಂದು ಬೆಳಿಗ್ಗೆ ೧೦.೩೦ಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡುವರು.