ಉಗ್ರರ ನಂಟು: ಶಂಕಿತ ಮೂವರ ಬಂಧನ

ಉಗ್ರ
Advertisement

ನಿಷೇಧಿತ ಭಯೋತ್ಪಾದಕ ಸಂಘಟನೆಯ ನಂಟನ್ನು ಹೊಂದಿರುವ ಮೂವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಇಬ್ಬರು ಹಾಗೂ ಮಂಗಳೂರು ಮೂಲದ ಓರ್ವನ ವಿರುದ್ಧ ಶಿವಮೊಗ್ಗ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಶಿವಮೊಗ್ಗದ ಸಿದ್ದೇಶ್ವರ ನಗರದ ನಿವಾಸಿ ಸಯ್ಯದ್ ಯಾಸೀನ್, ತೀರ್ಥಹಳ್ಳಿ ಸೂಪ್ಪುಗುಡ್ಡೆಯ ನಿವಾಸಿ ಶಾರೀಕ್ ಹಾಗೂ ಮಂಗಳೂರಿನ ಮಾಜ್ ಮುನೀರ್ ಅಹಮ್ಮದ್ ಎನ್ನುವವರ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತರನ್ನು ಶಿವಮೊಗ್ಗದ ಕೋರ್ಟ್ ಮುಂದೆ ಹಾಜರುಪಡಿಸಿ 7 ದಿನ ಪೊಲೀಸ್ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಎಸ್​ಪಿ ಲಕ್ಷ್ಮಿ ಪ್ರಸಾದ್ ತಿಳಿಸಿದ್ದಾರೆ.