ಯಾರೇ ಆಗಲಿ ಒತ್ತುವರಿ ತೆರವು ನಿಶ್ಚತ: ಸಚಿವ ಅಶೋಕ

ಆರ್‌. ಅಶೋಕ
Advertisement

ರಾಜಕಾರಣಿಗಳೇ ಆಗಿರಲಿ, ಬಡವರೇ ಆಗಿರಲಿ, ಶ್ರೀಮಂತರೇ ಆಗಿರಲಿ ಒತ್ತುವರಿ ತೆರವು ನಿಶ್ಚತ ಎಂದು ಸಚಿವ ಆರ್‌. ಅಶೋಕ ಹೇಳಿದರು.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸದ್ಯಕ್ಕೆ ಎರಡು ವಲಯಗಳಲ್ಲಿ ಒತ್ತುವರಿ ತೆರವು ಕಾರ್ಯ ನಡೆಯುತ್ತಿದೆ. ಬಡವರು ಮಾಡಿರುವ ಒತ್ತುವರಿ ತೆರವು ಮಾಡಲು ಮಾಧ್ಯಮದವರು ಬಿಡುತ್ತಿಲ್ಲ. ಶ್ರೀಮಂತರು ಮಾಡಿರುವ ಒತ್ತುವರಿ ತೆರವಿಗೆ ಕಾಂಗ್ರೆಸ್​ನವರು ಬಿಡುತ್ತಿಲ್ಲ. ಮುಂದಿನ ದಿನಗಳಲ್ಲಿ ಯಾರೇ ಒತ್ತುವರಿ ಮಾಡಿದ್ದರೂ ತೆರವುಗೊಳಿಸಲಾಗುವುದು ಎಂದರು.