28 ಕೋಟಿ ಮೌಲ್ಯದ ಚಿನ್ನ ವಶ

Advertisement

ತರೀಕೆರೆ: ತಾಲೂಕಿನ ಎಂ.ಸಿ ಹಳ್ಳಿ ಚೆಕ್ ಪೋಸ್ಟ್ ನಲ್ಲಿ ನಡೆದ ತಪಾಸಣೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿರುವ 47 ಕೆಜಿ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಚಿನ್ನದ ಮೌಲ್ಯ 28 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ತೆರಿಗೆ ಇಲಾಖೆ ಅಧಿಕಾರಿಳು ಪರಿಶೀಲನೆ ನಡೆಸುತ್ತಿದ್ದಾರೆ. ಚಿನ್ನಾಭರಣಗಳನ್ನು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ತರೀಕೆರೆ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದೇ ಚೆಕ್ ಪೋಸ್ಟ್ ನಲ್ಲಿ ಪದೇಪದೆ ಕೋಟ್ಯಂತರ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ಅಲ್ಲಲ್ಲಿ ಚೆಕ್​ಪೋಸ್ಟ್​ಗಳನ್ನು ಹಾಕಿ ತಪಾಸಣೆ ನಡೆಸುತ್ತಿದ್ದಾರೆ