ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಜಾತಿವಾರು ಲೆಕ್ಕಾಚಾರವಿಟ್ಟುಕೊಂಡು ಚರ್ಚೆಗಳು ಜೋರಾಗಿ ನಡೆದಿವೆ. ಅದರಲ್ಲೂ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಲಿಂಗಾಯತರಿಗೆ ಟಿಕೆಟ್ ನೀಡಬೇಕು ಎನ್ನುವ ಕೂಗು ಈಗ ಮತ್ತಷ್ಟು ಜೋರಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ದಿ. 3ರಂದು ಬೆಳಿಗ್ಗೆ 11ಕ್ಕೆ ಇಲ್ಲಿನ ನಾಗನೂರು ಮಠದಲ್ಲಿ ಲಿಂಗಾಯತ ಸಂಘಟನೆಗಳ ಪ್ರಮುಖರ ಸಭೆ ನಡೆಯಲಿದೆ.
ನಾಗನೂರು ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಸಭೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನಡೆದಿರುವ ಪ್ರಸಕ್ತ ರಾಜಕೀಯ ಸನ್ನಿವೇಶಗಳ ಬಗ್ಗೆಯೇ ಚರ್ಚೆ ನಡೆಯಲಿದೆ ಎನ್ನುವ ಮಾಹಿತಿ ಪತ್ರಿಕೆಗೆ ಸಿಕ್ಕಿದೆ. ಗಮನಿಸಬೇಕಾದ ಸಂಗತಿ ಎಂದರೆ, ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿರುವ ಲಿಂಗಾಯತರಿಗೆ ಟಿಕೆಟ್ ನೀಡಬೇಕು ಎನ್ನುವ ಕೂಗು ಕೇಳಿ ಬರುತ್ತಿದೆ.