40ಲಕ್ಷ ಲಂಚ: ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಶಾಸಕರ ಪುತ್ರ

40 ಲಕ್ಷ
Advertisement

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಲೋಕಾಯುಕ್ತ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ.
ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್‌ ಲಂಚ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಮುಖ್ಯ ಅಕೌಂಟೆಂಟ್ ಪ್ರಶಾಂತ್ ಮಾಡಾಳ್‌ ಲೋಕಾಯಕ್ತ ಬಲೆಗೆ ಬಿದ್ದ ಅಧಿಕಾರಿ.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ವಸ್ತು ಖರೀದಿ ಸಂಬಂಧ ಟೆಂಡರ್‌ ಅನುಮೋದನೆಗೆ 80 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದ್ದು, 40 ಲಕ್ಷ ರೂ. ಪಡೆಯುತ್ತಿದ್ದಾಗ ಪ್ರಶಾಂತ್ ಮಾಡಾಳ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.