ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

Advertisement

ಇಸ್ಲಾಮಾಬಾದ್‌: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಇಂದು ದುಬೈನ ಆಸ್ಪತ್ರೆಯಲ್ಲಿ ನಿಧನರಾದರು. ಪಾಕಿಸ್ತಾನದ ಮಾಜಿ ಅಧ್ಯಕ್ಷ ಮುಷರಫ್‌ (79) ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ದುಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಮುಷರಫ್‌ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಒಂದೆರಡು ವಾರಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.