ಚುನಾವಣೆ ಬಳಿಕ ಪ್ರಹ್ಲಾದ್ ಜೋಶಿ ಮುಖ್ಯಮಂತ್ರಿ ಆಗ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಪ್ರಹ್ಲಾದ್ ಜೋಶಿಯನ್ನ ಚುನಾವಣೆ ನಂತರ ಸಿಎಂ ಮಾಡಬೇಕು ಅಂತ ಸಂಘ ಪರಿವಾರ ನಿರ್ಧರಿಸಿದೆ. ಉಳಿದಂತೆ 8 ಮಂದಿ ಉಪಮುಖ್ಯಮಂತ್ರಿ ಆಗಲಿದ್ದಾರೆ. ಹೀಗಾಗಿ ಜೆಡಿಎಸ್ ವಿರುದ್ದ ಪಂಚರತ್ನ ರಥಯಾತ್ರೆ ಬಗ್ಗೆ ಪ್ರಹ್ಲಾದ್ ಜೋಷಿ ಟೀಕೆ ಮಾಡುತ್ತಿದ್ದಾರೆ ಎಂದು ಎಚ್ಡಿಕೆ ಆರೋಪಿಸಿದ್ದಾರೆ. ನಮ್ಮ ಪಂಚರತ್ನ ಯಾತ್ರೆಗೆ ಜನಸ್ಪಂದನೆ ನೋಡಿ ಹೆದರಿದ್ದಾರೆ. ಹೀಗಾಗಿ ಪಂಚರತ್ನ ಯಾತ್ರೆ ಬದಲು ನವಗ್ರಹ ಯಾತ್ರೆ ಮಾಡುವಂತೆ ಟೀಕೆ ಮಾಡುತ್ತಿದ್ದಾರೆ.
ಅವರು ನಮ್ಮ ಕರ್ನಾಟಕದ ಹಳೆಯ ಕಾಲದ ಬ್ರಾಹ್ಮಣ ಅಲ್ಲ. ಬ್ರಾಹ್ಮಣರಲ್ಲಿ ಎರಡು ಮೂರು ವಿಧಗಳಿವೆ. ಶೃಂಗೇರಿಯ ಮಠ ಒಡೆದ ವರ್ಗ ಇವರದ್ದು. ಮಹಾತ್ಮ ಗಾಂಧಿ ಕೊಂದ ಬ್ರಾಹ್ಮಣರು ಇವರು ಎಂದರು.