ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಆಗಿ ಮರಾಠಾ ಸಮುದಾಯದ ಶೋಭಾ ಸೋಮನಾಚೆ ಹಾಗೂ ಉಪಮೇಯರ್ ಆಗಿ ರೇಷ್ಮಾ ಪಾಟೀಲ್ ಆಯ್ಕೆಯಾಗಿದ್ದಾರೆ.
ಮೇಯರ್ ಸ್ಥಾನ ಸಾಮಾನ್ಯ ಮಹಿಳೆ, ಉಪಮೇಯರ್ ಹಿಂದುಳಿದ ವರ್ಗ ಬಿ ಮಹಿಳೆಗೆ ಮೀಸಲಾಗಿದ್ದರಿಂದ ಈ ಮೀಸಲು ಗೊಂದಲದಿಂದ ಮೇಯರ್ ಆಯ್ಕೆಯೇ ನಡೆದಿರಲಿಲ್ಲ. 58 ವಾರ್ಡ್ಗಳ ಪೈಕಿ 35 ವಾರ್ಡ್ಗಳಲ್ಲಿ ಗೆದ್ದಿರುವ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿತ್ತು. ಆದರೂ ಶಾಸಕರಾದ ಅಭಯ ಪಾಟೀಲ್, ಅನಿಲ್ ಬೆನಕೆ ಸಮ್ಮುಖದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಮೇಯರ್ ಸ್ಥಾನ ಯಾರಿಗೆ? ಉಪಮೇಯರ್ ಸ್ಥಾನ ಯಾರಿಗೆ ಎಂಬ ಬಗ್ಗೆ ಚರ್ಚೆಯಾಗಿತ್ತು.