ಕೊಲೆ ಆರೋಪಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡದಿರಿ: ಪ್ರವೀಣ್ ನೆಟ್ಟಾರು ಹೆತ್ತವರ ಆಗ್ರಹ

Advertisement

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗೆ ಎಸ್.ಡಿ.ಪಿ.ಐ. ಟಿಕೆಟ್ ನೀಡಲು ಮುಂದಾಗಿದೆ ಎನ್ನಲಾಗಿದ್ದು, ಯಾವುದೇ ಕಾರಣಕ್ಕೂ ಆರೋಪಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಪ್ರವೀಣ ಪೋಷಕರು ಆಗ್ರಹಿಸಿದ್ದಾರೆ, ಶಾಫಿ ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಯಾಗಿದ್ದು, ಈತನನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಿಸಿದ ಎಸ್ ಡಿಪಿಐ ಘೋಷಿಸಲು ಮುಂದಾಗಿದೆ.
ಈ ಹಿನ್ನಲೆಯಲ್ಲಿ ಶಾಫಿ ಬೆಳ್ಳಾರೆಗೆ ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಪ್ರವೀಣ್ ತಂದೆ ಶೇಖರ ಪೂಜಾರಿ, ತಾಯಿ ರತ್ನಾವತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅನ್ಯಾಯವಾಗಿ ನಮ್ಮ ಮಗನನ್ನು ಕೊಂದ ಪಾಪಿ ಆತ. ಆಡಳಿತದಲ್ಲಿ ಯಾವುದೇ ಅಧಿಕಾರ ಇಲ್ಲದಿದ್ದಂತಹ ಸಂದರ್ಭದಲ್ಲಿ ಆತ ನಮ್ಮ ಮಗನನ್ನು ಕೊಂದ. ನಾಳೆ ಅಧಿಕಾರ ಪಡೆದ ಬಳಿಕ ಎಲ್ಲರನ್ನೂ ಕೊಲ್ಲುತ್ತಾನೆ ಎಂದು ಅವರು ಭಯ ವ್ಯಕ್ತಪಡಿಸಿದ್ದಾರೆ.
ನಮಗೆ ಮನೆಯಿಂದ ಹೊರಗೆ ಹೋಗಲಾರದಂತ ಸ್ಥಿತಿಯನ್ನು ಶಾಫಿ ಬೆಳ್ಳಾರೆ ನಿರ್ಮಿಸಬಹುದು. ನಮಗೆ ಇದ್ದ ಒಬ್ಬನೇ ಮಗನನ್ನು ಮುಗಿಸಿದ ಪಾಪಿ ಆತ. ಈಗ ನಮಗೆ ಇಬ್ಬರಿಗೂ ಆರೋಗ್ಯ ಚೆನ್ನಾಗಿಲ್ಲ. ನನಗೆ ಮೂರು ಬಾರಿ ಹಾರ್ಟ್ ಆಪರೇಷನ್ ಆಗಿದೆ. ಕಣ್ಣು ಕೇಳೋದಿಲ್ಲ, ಕಿವಿ ಕೇಳೋದಿಲ್ಲ. ನಮ್ಮನ್ನು ಈ ಸ್ಥಿತಿಗೆ ತಂದ ಆರೋಪಿಗೆ ಚುನಾವಣೆ ಸ್ಪರ್ಧಿಸಲು ಅವಕಾಶ ನೀಡಲೇಬಾರದು ಎಂದು ಶೇಖರ ಪೂಜಾರಿ ಆಕ್ರೋಶ ಹೊರ ಹಾಕಿದ್ದಾರೆ.