ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವದಲ್ಲಿ ಇರುವವರಿಗೆ ದುರಹಂಕಾರ ಮತ್ತು ಬೌದ್ಧಿಕ ದಿವಾಳಿಕೋರತನದಿಂದ ಪಕ್ಷದ ಹಿರಿಯರು ಪಕ್ಷ ತೊರೆಯುವಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದ ಗುಲಾಂ ನಬೀ ಅಜಾದ್ ಈಗ ಪಕ್ಷ ತೊರೆದಿದ್ದಾರೆ. ಈ ಹಿಂದೆಯೂ ಸಾಕಷ್ಟು ಹಿರಿಯ ನಾಯಕರು ಪಕ್ಷದ ದುರಾಡಳಿತದಿಂದ ಮನನೊಂದು ಹೊರಬಂದಿರುವ ಉದಾಹರಣೆ ಇದೆ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಅನುಭವಿಸಿ ಈಗ ತೊರೆದಿದ್ದಾರೆ ಎಂಬಂತೆ ಸಾಕಷ್ಟು ಪ್ರತಿಕ್ರಿಯೆ ಬಂದಿವೆ. ಪಕ್ಷದಲ್ಲಿ ಸ್ಥಾನಮಾನ ಕೊಟ್ಟಿದ್ದೀರಾ ಅಂದರೆ ಆ ಸ್ಥಾನಮಾನ ಅವಧಿ ಮುಗಿದ ಬಳಿಕವೂ ಯಾವುದೇ ವ್ಯಕ್ತಿಯಾದರೂ ಸರಿಯೇ ಅವರ ಘನತೆ, ಗೌರವಕ್ಕೆ ತಕ್ಕಂತೆ ನಡೆದುಕೊಳ್ಳಬೇಕು. ಅಲ್ಲಿನ ನಾಯಕರು, ಅಧ್ಯಕ್ಷರು ಆ ರೀತಿ ನಡೆದುಕೊಳ್ಳಬೇಕು. ಆದರೆ, ಕಾಂಗ್ರೆಸ್ ಪಕ್ಷದಲ್ಲಿ ದುರಹಂಕಾರ ನಡೆಯಿಂದ ಮನನೊಂದು ಪಕ್ಷ ತೊರೆದಿದ್ದಾರೆ ಎಂದು ಟೀಕಿಸಿದರು.