ದಾವಣಗೆರೆ: ನೂತನ ಸಿಇಐಆರ್ ವೆಬ್ ಪೋರ್ಟಲ್ ಮೂಲಕ ಕಳೆದುಹೋದ ಮೊಬೈಲ್ ಮರಳಿ ತನ್ನ ಮಾಲೀಕನ ಕೈ ಸೇರಿದೆ. ನೂತನ ಸಿಇಐಆರ್ ವೆಬ್ ಪೋರ್ಟಲ್ ಮೂಲಕ ಪತ್ತೆಯಾದ ಜಿಲ್ಲೆಯ ಮೊದಲ ಪ್ರಕರಣ ಇದಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ ಬಿ ರಿಷ್ಯಂತ್ ಅವರು ಮೊಬೈಲ್ನ್ನು ವಾರಸುದಾರರಿಗೆ ಮರಳಿ ನೀಡಿದ್ದಾರೆ. ಕೇಂದ್ರ ದೂರಸಂಪರ್ಕ ಇಲಾಖೆ ಜಾರಿಗೆ ತಂದಿರುವ ಸಿಇಐಆರ್ (CEIR) ಪೋರ್ಟಲ್ ಬಳಸಿಕೊಂಡು ಕಳುವಾದ ಮೊಬೈಲ್ ಬ್ಲಾಕ್ ಮಾಡಬಹುದಾಗಿದೆ. ಈ ಪೋರ್ಟಲ್ ಮೂಲಕವೇ ದಾವಣಗೆರೆ ಜಿಲ್ಲಾ ಪೊಲೀಸರು ಮೊಬೈಲ್ ಪತ್ತೆ ಹಚ್ಚಿ ಸಂಬಂಧಪಟ್ಟ ವ್ಯಕ್ತಿಗೆ ಒಪ್ಪಿಸಿದ್ದಾರೆ.