ಬೆಂಗಳೂರು: ಕೆಪಿಸಿಸಿಯಿಂದ ನಾಳೆ ಕರೆ ನೀಡಿದ್ದ ಕರ್ನಾಟಕ ಬಂದ್‌ನ್ನು ಹಿಂಪಡೆಯಲಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಸಮಿತಿ ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿ – ಪೋಷಕರ ಮನವಿ ಮೇರೆಗೆ ಬಂದ್ ಹಿಂಪಡೆಯಲಾಗಿದೆ, ಮುಂದಿನ ಹೋರಾಟಕ್ಕೆ ಸಂಬಂಧಿಸಿದಂತೆ ಸ್ಕ್ರೀನಿಂಗ್ ಕಮಿಟಿ ಸಭೆ ಬಳಿಕ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.