ಹುಬ್ಬಳ್ಳಿ : ಮಾರ್ಚ್ 11 ರಂದು ಹುಬ್ಬಳ್ಳಿ ನಗರದಲ್ಲಿ ಹೋಳಿ ಹಬ್ಬ ಇರುವುದರಿಂದ ಅಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಹುಬ್ಬಳ್ಳಿ ಧಾರವಾಡ ಮಧ್ಯದಲ್ಲಿ ಬಿಆರ್ ಟಿಎಸ್ ಬಸ್ ಗಳ ಕಾರ್ಯಾಚರಣೆ ಇರುವುದಿಲ್ಲ.
ಬಣ್ಣದ ಕಾರ್ಯಕ್ರಮ ಮುಗಿದ ಬಳಿಕ ಬಿಆರ್ ಟಿಎಸ್ ಬಸ್ ಗಳನ್ನು ಪ್ರಯಾಣಿಕರ ದಟ್ಟನೆಗೆ ಅನುಗುಣವಾಗಿ ಕಾರ್ಯಾಚರಣೆ ಮಾಡಲಾಗುವುದು. ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಧಾರವಾಡ ನಾನ್ ಬಿಆರ್ ಟಿಎಸ್ ಬಸ್ ಗಳಲ್ಲಿ ಬಿಆರ್ ಟಿಎಸ್ ಮಾಸಿಕ ಪಾಸ್ ಸ್ಮಾರ್ಟ್ ಕಾರ್ಡ್ ತೋರಿಸಿ ಪ್ರಯಾಣಿಕರು ಪ್ರಯಾಣಿಸಬಹುದು. ಸಾರ್ವಜನಿಕರು ಸಂಸ್ಥೆಯೊಂದಿಗೆ ಸಹಕರಿಸುವಂತೆ ಹುಬ್ಬಳ್ಳಿ ಧಾರವಾಡ ನಗರ ಸಾರಿಗೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.