ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ಇನ್ನಿಲ್ಲ

Advertisement

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ (62) ಅವರು ಶನಿವಾರ ಹೃದಯಾಘಾತದಿಂದ ಮೈಸೂರಿನಲ್ಲಿ ನಿಧನರಾದರು.  ಇವರು ಬೆಂಗಳೂರಿನ ಜಿಕೆವಿಕೆಯಲ್ಲಿ ಪದವಿ ಪಡೆದಿದ್ದರು. ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ವಿಧಾನಸಭೆ ಚುನಾವಣೆ ಸ್ಪರ್ಧೆಗೆ ಸಿದ್ಧತೆ ಮಾಡಿಕೊಂಡಿದ್ದರು. 2 ಬಾರಿ ಶಾಸಕರು ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.