ಚುನಾವಣೆ ಎದುರಿಸಲು ಬಿಜೆಪಿ ಸನ್ನದ್ಧ: ಬೊಮ್ಮಾಯಿ

cm
Advertisement

ಬೆಂಗಳೂರು: ಮೇ 10 ನಡೆಯಲಿರುವ ಚುನಾವಣೆ ಎದುರಿಸಲು ಬಿಜೆಪಿ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಬಲಿಷ್ಠ ಕೇಡರ್ ಇರುವ, ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ. ಈಗಾಗಲೇ ಹಲವಾರು ಅಭಿಯಾನ ಮಾಡಿದೆ. ನಿರಂತರವಾಗಿ ಪಕ್ಷದ ಸಂಘಟನೆ ಮಾಡಿಕೊಂಡು ಬಂದಿದ್ದು, ಬೂತ್ ಮಟ್ಟದ ಅಭಿಯಾನ, ಮೋರ್ಚಾಗಳ ಸಮ್ಮೇಳನ, ಸಂಕಲ್ಪ ಯಾತ್ರೆ, ವಿಜಯ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ. ಚುನಾವಣೆ ಎದುರಿಸಲು ಎಲ್ಲಾ ತಯಾರಿ ಮಾಡಿಕೊಂಡಿದೆ ಎಂದರು.
ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿನ ಕಳೆದ ಮೂರು ತಿಂಗಳು ಮಾಡಿರುವ ಪ್ರವಾಸ ಸಕಾರಾತ್ಮಕ ಪರಿಣಾಮ ಬೀರಿದೆ. 2023ರ ಮೇ 13ರಂದು ಸ್ಪಷ್ಟವಾದ ಬಹುಮತ ಭಾರತೀಯ ಜನತಾ ಪಕ್ಷಕ್ಕೆ ಸಿಗಲಿದೆ. ಮತ್ತೆ ನಮ್ಮ ಸರ್ಕಾರ‌ 5 ವರ್ಷ ಆಡಳಿತ ಮಾಡುವುದರಲ್ಲಿ ಸಂಶಯವಿಲ್ಲ ಎಂದರು.