ʼದಿ ಎಲಿಫೆಂಟ್ ವಿಸ್ಪರರ್ಸ್’ ಡಾಕ್ಯುಮೆಂಟರಿ ನಿರ್ಮಿತ ತಂಡವು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೇಟಿ ಮಾಡಿದ್ದಾರೆ, ಭೇಟಿ ಮಾಡಿದ ಚಿತ್ರಗಳನ್ನು ನರೇಂದ್ರ ಮೋದಿಯವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಿನಿಮಾದ ತೇಜಸ್ಸು ಮತ್ತು ಯಶಸ್ಸು ಜಾಗತಿಕ ಗಮನ ಸೆಳೆಯುವುದರ ಜೊತೆಗೆ ಮೆಚ್ಚುಗೆಯನ್ನೂ ಗಳಿಸಿದೆ. ಇಂದು, ಅದಕ್ಕೆ ಸಂಬಂಧಿಸಿದ ಅದ್ಭುತ ತಂಡವನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿತು. ಅವರು ಭಾರತವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ. ಎಂದಿದ್ದಾರೆ.
ದಿ ಎಲಿಫೆಂಟ್ ವಿಸ್ಪರರ್ಸ್’ ಡಾಕ್ಯುಮೆಂಟರಿಗೆ ನಿರ್ದೇಶನ ಮಾಡಿರುವ ಕಾರ್ತಿಕಿ ಗೊನ್ಸಾಲ್ವೆಸ್ ಅವರು ಮೂಲತಃ ತಮಿಳುನಾಡಿನ ಊಟಿಯವರು. ಡಾಕ್ಯುಮೆಂಟರಿ ಫಿಲ್ಮ್ ಮೇಕರ್ ಆಗಿರುವ ಕಾರ್ತಿಕಿ, ಉತ್ತಮ ಫೋಟೋಗ್ರಾಫರ್ ಕೂಡ ಹೌದು. ಈ ಹಿಂದೆ ಕ್ಯಾಮೆರಾ ಅಪರೇಟರ್ ಆಗಿ ಅನಿಮಲ್ ಪ್ಲಾನೆಟ್ ಮತ್ತು ಡಿಸ್ಕವರಿ ಚಾನೆಲ್‌ಗಳಿಗೆ ಕಾರ್ತಿಕಿ ಕೆಲಸ ಮಾಡಿದ್ದಾರೆ. 41 ನಿಮಿಷಗಳ ‘ದಿ ಎಲಿಫೆಂಟ್ ವಿಸ್ಪರರ್ಸ್’ ಮೂಲಕ ಆಸ್ಕರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.