ಡಿಕೆಶಿಯನ್ನು ಸಿಎಂ ಮಾಡಲ್ಲ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ

siddu
Advertisement

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಅಭ್ಯರ್ಥಿ. ಆದರೆ, ಹೈಕಮಾಂಡ್ ಅದಕ್ಕೆ ಸಮ್ಮತಿ ನೀಡುವುದಿಲ್ಲ ಎನ್ನುವ ಸಿದ್ದರಾಮಯ್ಯನವರ ಹೇಳಿಕೆ ಕಾಂಗ್ರಸ್‌ನಲ್ಲಿ ತಲ್ಲಣ ಸೃಷ್ಟಿಸಿದ್ದು ಭಾರಿ ಚರ್ಚೆಗೆ ಗ್ರಾಸವಾಗಿದೆ.
ಇನ್ನು ಈ ಹೇಳಿಕೆ ಕುರಿತಂತೆ ಎಚ್ಚೆತ್ತುಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಸ್ಪಷ್ಟನೆ ನೀಡಿದ್ದಾರೆ. “ಸಿಎಂ ಆಯ್ಕೆ ಪ್ರಜಾಸತ್ತಾತ್ಮಕ ಪ್ರಕ್ರಿಯೆ, ನಾನು ಸಿಎಂ ಆಕಾಂಕ್ಷಿ ಮತ್ತು ಡಿಕೆ ಶಿವಕುಮಾರ್ ಕೂಡ ಸಿಎಂ ಆಕಾಂಕ್ಷಿ ಎಂದು ನಾನು ಹೇಳಿದ್ದೇನೆ. ಆದರೆ, ಮಾಧ್ಯಮಗಳು ಹೇಳುತ್ತಿರುವುದು ಸುಳ್ಳು” ಎಂದು ಅವರು ತಿಳಿಸಿದ್ದಾರೆ.
ನಾನು ಮತ್ತು ಡಿಕೆಶಿ ಇಬ್ಬರೂ ಸಿಎಂ ಆಕಾಂಕ್ಷಿ. ಆದರೆ ಹೈಕಮಾಂಡ್‌ ಅವರಿಗೆ ಸಿಎಂ ಹುದ್ದೆ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ಸಂದರ್ಶನದಲ್ಲಿ ಹೇಳಿದ್ದಾರೆ ಎಂದು ಖಾಸಗಿ ಸುದ್ದಿವಾಹಿನಿ ವರದಿ ಮಾಡಿತ್ತು.