ನಾನೇ ಕಿಂಗ್, ಜೆಡಿಎಸ್ ಪಕ್ಷವೇ ಕಿಂಗ್ ಮೇಕರ್ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕಿಂಗ್ ಆಗೋದನ್ನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಜೆಡಿಎಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ದೊರೆಯಲಿದೆ. ಬಿಜೆಪಿ ಮತ್ತು ಕಾಂಗ್ರೆಸ್ 60-70 ಸೀಟ್ ಕೂಡ ದಾಟಲ್ಲ ಎಂದಿದ್ದಾರೆ. ಇನ್ನು ಕಾಂಗ್ರೆಸ್ನಲ್ಲಿ ಸಿಎಂ ಆಗಬೆಕೆನ್ನುವವರ ಪಟ್ಟಿ ದೊಡ್ಡದಿದೆ. ಸಿದ್ದರಾಮಯ್ಯ ಸಿಎಂ ಆಗಲ್ಲ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದರು.