ಕೊರೊನಾ ಸೋಂಕು; ಧಾರವಾಡದಲ್ಲಿ ಒಬ್ಬ ಸಾವು

Advertisement

ಹುಬ್ಬಳ್ಳಿ: ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ನವನಗರದ ವ್ಯಕ್ತಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿ ೫೯ ಕೊರೊನಾ ಸಕ್ರಿಯ ಪ್ರಕರಣಗಳಿವೆ. ಅದರಲ್ಲಿ ೨೧ ಪ್ರಕರಣಗಳು ಶುಕ್ರವಾರ ಹೊಸದಾಗಿ ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಚಿಕಿತ್ಸೆಗೆ ದಾಖಲಾದವರಲ್ಲಿ ೭ ಜನ ಗುಣಮುಖರಾಗಿದ್ದಾರೆ. ಐವರು ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.