ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಸೂರತ್ ನ್ಯಾಯಾಲಯದ ನ್ಯಾಯಾಧೀಶರ ನಾಲಿಗೆ ಕತ್ತರಿಸುವುದಾಗಿ ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡನ ವಿರುದ್ಧ ಪ್ರಕರಣ ದಾಖಲಾಗಿದೆ.
ತಮಿಳುನಾಡಿನ ದಿಂಡಿಗಲ್ ಜಿಲ್ಲಾಧ್ಯಕ್ಷ ಮಣಿಕಂದನ್ ಎನ್ನುವವರ ವಿರುದ್ಧ ದಿಂಡಿಗಲ್ ಪೊಲೀಸರು ಶನಿವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸೂರತ್ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಎಚ್. ವರ್ಮಾ ಮಾರ್ಚ್ 23ರಂದು ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ್ದರು.