ಬೇಕೆ ಬೇಕು ಶೆಟ್ಟರ್ ಬೇಕು: ಅಭಿಮಾನಿಗಳ ಒತ್ತಾಯ

ಶೆಟ್ಟರ್
Advertisement

ಹುಬ್ಬಳ್ಳಿ: ಬೇಕೆ ಬೇಕು ಶೆಟ್ಟರ್ ಬೇಕು, ಬೇಕೆ ಬೇಕು ಶೆಟ್ಟರ್ ಬೇಕು ಎಂಬ ಕೂಗು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಹೆಚ್ಚಾಗಿದೆ.
ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ಕೈ ತಪ್ಪುತ್ತದೆ ಎನ್ನುವ ಹಿನ್ನೆಲೆಯಲ್ಲಿ ಶೆಟ್ಟರ್ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಶೆಟ್ಟರ್ ಅವರ ಭಾವ ಚಿತ್ತ ಹಿಡಿದು ಪ್ರತಿಭಟನೆ ನಡೆಸಿದರು. ಕೇಶ್ವಾಪುರದ ಸರ್ವೋದಯ ಸರ್ಕಲ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಅಭಿಮಾನಿಗಳು, ಅಲ್ಲಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಾಜಿ ಸಿಎಂ‌ ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ನೀಡಬೇಕು. ಅವರು ಮತ್ತೊಮ್ಮೆ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು. ಹೀಗಾಗಿ ಅವರಿಗೆ ಟಿಕೆಟ್ ನೀಡಬೇಕು ಎಂದು ಅಭಿಮಾನಿಗಳು ಒತ್ತಾಯಿಸಿದರು.