ಮತದಾನ ಮಾಡುವ ಮುನ್ನ ಸಿಲಿಂಡರ್‌ಗೆ ನಮಿಸಿ

ಸಿಲಿಂಡರ್‌
Advertisement

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಪದ್ಮರಾಜ್ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಸಿಲಿಂಡರ್‌ಗೆ ನಮಸ್ಕರಿಸಿ ಎಂದ ಡಿ.ಕೆ.ಶಿವಕುಮಾರ್, ಚುನಾವಣೆ ಸಮಯದಲ್ಲಿ ಮೋದಿ ಅವರು ಮತದಾನ ಮಾಡುವ ಮುನ್ನ ಅಡುಗೆ ಅನಿಲ ಸಿಲಿಂಡರ್‌ಗೆ ನಮಸ್ಕರಿಸಿ ಮತ ಹಾಕಿ ಎಂಬ ಸಂದೇಶ ನೀಡಿದ್ದರು. ಈ ಬಾರಿಯ ಚುನಾವಣೆಯಲ್ಲೂ ಅವರ ಮಾತಿನಂತೆ ನಾವು ನಮ್ಮ ಪಕ್ಷದ ಚುನಾವಣೆ ಪ್ರಚಾರ ಆರಂಭಿಸುವ ಮುನ್ನ ಅಡುಗೆ ಅನಿಲ ಸಿಲಿಂಡರ್‌ಗೆ ನಮಿಸಲು ತೀರ್ಮಾನಿಸಿದ್ದೇವೆ. ಇದೇ ಪದ್ಧತಿಯನ್ನು ಬ್ಲಾಕ್ ಹಾಗೂ ಬೂತ್ ಮಟ್ಟದ ನಾಯಕರೂ ಪಾಲಿಸಬೇಕು ಎಂದು ಮನವಿ ಮಾಡುತ್ತೇನೆ. ಮತದಾರರು ಮತದಾನ ಮಾಡುವ ಮುನ್ನ ಇದೇ ರೀತಿ ನಮಿಸಿ ಮತದಾನ ಮಾಡಲಿ ಎಂದು ಕರೆ ನೀಡಿದರು.
ಬಿಜೆಪಿಯಿಂದ ಪದ್ಮರಾಜ್, ಉಮೇಶ್ ಸೇರಿದಂತೆ ಸುಮಾರು 450 ನಾಯಕರು ಹಾಗೂ ಕಾರ್ಯಕರ್ತರು ಪಕ್ಷ ಸೇರಿದರು. ಈ ವೇಳೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜಾಜಿನಗರ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರ ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್, ಶಾಸಕ ಭೈರತಿ ಸುರೇಶ್, ಮಾಜಿ ಮೇಯರ್ ಪದ್ಮಾವತಿ ಮತ್ತಿತರರು ಉಪಸ್ಥಿತರಿದ್ದರು.