ಕರ್ನಾಟಕ ವಿಧಾನಸಭೆ 2023ರ ವೇಳಾಪಟ್ಟಿಯಂತೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏಪ್ರಿಲ್ 20ರ ವರೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದೆ. ಏ.13 -ಚುನಾವಣಾ ಅಧಿಸೂಚನೆ ಮತ್ತು ನಾಮಪತ್ರ ಸಲ್ಲಿಕೆ ಆರಂಭ.
ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಮತ್ತು 16ರಂದು ಭಾನುವಾರ ಸಾರ್ವತ್ರಿಕ ರಜಾ ದಿನವಾಗಿದ್ದು, ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಏಪ್ರಿಲ್ 24ರಂದು ಮಧ್ಯಾಹ್ನ 3 ಗಂಟೆಯೊಳಗಾಗಿ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.