ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ನಗರಸಭೆ ವ್ಯಾಪ್ತಿಯಲ್ಲಿ ಹಂದಿ ಜ್ವರ ಪತ್ತೆಯಾಗಿದೆ. ಈ ಪ್ರಕರಣವು ಜಿಲ್ಲೆಯಲ್ಲಿ ಪ್ರಥಮವಾಗಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಜಿ.ಎಚ್.ಗಲಗಲಿ ತಿಳಿಸಿದರು.
ಅವರು ಶನಿವಾರ ಸ್ಥಳೀಯ ನಗರ ಸಭೆಯಲ್ಲಿ ಸಂಕ ದೊಂದಿಗೆ ಮಾತನಾಡಿ, ಬಾಗಲಕೋಟೆ ಜಿಲ್ಲೆಯಲ್ಲಿ ಹಂದಿ ಜ್ವರ ಪತ್ತೆಯಾಗಿರುವ ಮೊದಲ ಉದಾಹರಣೆಯಾಗಿದೆ.ಈ ನಿಮಿತ್ತವಾಗಿ ಆ ಪ್ರದೇಶದಲ್ಲಿ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ. ಜ್ವರದಿಂದ ಬಳಲುತ್ತಿರುವ ವ್ಯಕ್ತಿಗಳ ರಕ್ತದ ಮಾದರಿಯನ್ನು ಪಡೆದುಕೊಂಡು ಪರೀಕ್ಷೆಗಾಗಿ ಕಳಿಸಲಾಗುವುದು.
ಈ ಪ್ರದೇಶದಲ್ಲಿ ಹಂದಿಗಳ ಗೂಡುಗಳು, ಸಾಗಾಣಿಕ ಕೇಂದ್ರಗಳುಇದ್ದರೆ ಅವುಗಳನ್ನು ತೆರವುಗೊಳಿಸುವ ಕಾರ್ಯವನ್ನು ಕೈಗೊಳ್ಳಲಾಗುವುದು. ಜ್ವರ ಕಂಡು ಬಂದ ಪ್ರದೇಶದಲ್ಲಿ ನಗರಸಭೆಯ ಅಧಿಕಾರಿಗಳ ಸಹಾಯದೊಂದಿಗೆ ಫಾಗಿಂಗ್ ವ್ಯವಸ್ಥೆಯನ್ನು ಕೂಡಾ ಮಾಡಲಾಗುವುದು. ಜ್ವರ ಪೀಡಿತ ಮಗುವಿನ ಆರೋಗ್ಯ ಸ್ಥಿರವಾಗಿದೆ. ಯಾವುದೆ ಸಮಸ್ಯೆ ಇಲ್ಲ ಎಂದು ಡಾ.ಜಿ.ಎಚ್.ಗಲಗಲಿ ತಿಳಿಸಿದರು.