ಕಾಂಗ್ರೆಸ್‌ ಶಾಸಕ ರಾಜೀನಾಮೆ

ಅಖಂಡ
Advertisement

ಕಾಂಗ್ರೆಸ್‌ ಪಕ್ಷದ ನಾಯಕ ಅಖಂಡ ಶ್ರೀನಿವಾಸ ಮೂರ್ತಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಶಿರಸಿಯ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿ ಬಳಿಕ ಮಾತನಾಡಿದ ಅವರು, ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ನಾಳೆ ಪಕ್ಷದ ಕಾರ್ಯಕರ್ತರ ಜೊತೆ ಸಭೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆಂದು ಹೇಳಿದರು.