ಶೆಟ್ಟರ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

Advertisement

ಬೆಂಗಳೂರು: ನಾಳೆ ಸೋಮವಾರ ಬೆಳಿಗ್ಗೆ 8.15 ಕ್ಕೆ ಮಾಜಿ ಸಿಎಂ ಜಗದೀಶ ಶೆಟ್ಟರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ಮನೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಸಭೆ ನಡೆದ ಬಳಿಕ ಶೆಟ್ಟರ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಡಿ.ಕೆ ಶಿವಕುಮಾರ್, ರಣದೀಪಸಿಂಗ್ ಸುರ್ಜೇವಾಲಾ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.