ಶೆಟ್ಟರಗೆ ಅದ್ದೂರಿ ಸ್ವಾಗತ ಕೋರಿದ ಕೈ ಕಾರ್ಯಕರ್ತರು

ಶೆಟ್ಟರ
Advertisement

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಮೊದಲ ಬಾರಿ ಹುಬ್ಬಳ್ಳಿಗೆ ಆಗಮಿಸಿದ ಜಗದೀಶ ಶೆಟ್ಟರ್ ಅವರನ್ನು ಕಾಂಗ್ರೆಸ್‌ನ ನೂರಾರು ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಶೆಟ್ಟರ್ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಹಾರ ತುರಾಯಿ, ಶಾಲು ಹೊದಿಸಿ ಸನ್ಮಾನಿಸಿದರು. ಈ ವೇಳೆ ಮಹಾನಗರ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹುಸೇನ್ ಹಳ್ಳೂರ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.