ಸೇನೆ ಮತ್ತು ಅರೆಸೇನಾ ಗುಂಪಿನ ನಡುವೆ ಭೀಕರ ಕಾಳಗ ನಡೆಯುತ್ತಿರುವ ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯ ಆರಂಭವಾಗಿದೆ.
ಆಪರೇಷನ್ ಕಾವೇರಿ ಅಡಿಯಲ್ಲಿ ಭಾರತೀಯರ ಮೊದಲ ಬ್ಯಾಚ್ ಹೊರಟಿದ್ದು, INS ಸುಮೇಧಾ 278 ಜನರೊಂದಿಗೆ ಸುಡಾನ್‌ನಿಂದ ಜೆದ್ದಾಗೆ ಹೊರಟಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.
