ನಿಂತಿದ್ದ ಲಾರಿಗೆ ಕ್ರೂಷರ್ ಡಿಕ್ಕಿ ಐದು ಜನ ಸಾವು

Advertisement


ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಷರ್ ವಾಹನ ಡಿಕ್ಕಿಯಾಗಿ ಐದು ಜನ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, 13 ಜನರಿಗೆ ಗಾಯಗಳಾಗಿದ್ದು 5 ಜನ ಮೃತಪಟ್ಟ ಘಟನೆ ತಾಲೂಕಿನ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬಳಿ ಮಂಗಳವಾರ ಬೆಳಗಿನ ಜಾವ ನಡೆದಿದೆ.
ಆಂಧ್ರ ಪ್ರದೇಶದ ನಂದ್ಯಾಳ ಜಿಲ್ಲೆ 18 ಜನ ಕಲಬುರಗಿಯ ಖ್ಯಾತ ಬಂದೇನವಾಜ ದರ್ಗಾದ ಉರುಸ್ (ಜಾತ್ರೆಗೆ) ತೆರಳಲು. ನಸುಕಿನ ಜಾವ ನಾಲ್ಕು ಗಂಟೆಗೆ ನಿದ್ದೆ ಮಂಪರ್ನಲ್ಲಿದ್ದ ಕ್ರೂಷರ್ ಚಾಲಕ ಬಳಿಚಕ್ರ ಬಳಿ ರಸ್ತೆ ಪಕ್ಕ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಈ ಘಟನೆಯಲ್ಲಿ ಐದು ಜನ ಸ್ಥಳದಲ್ಲಿಯೇ ಸಾವಿಗೀಡಾಗಿದ್ದರೆ, ಐದು ಜನ ಸಂಬಧಿಕರಾಗಿದ್ದರೆ, ತಂದೆ, ಮಗ ಮತ್ತು ಇಬ್ಬರು ಮಕ್ಕಳು ಮೃತರಾಗಿದ್ದಾರೆ. ಆಂಧ್ರ ಪ್ರದೇಶದ ಬಂಡಿ ಆತ್ಮಕೂರ ಗ್ರಾಮದ ತಂದೆ ಮುನೀರ್ ಹಾಗೂ ಪುತ್ರ ಮುದಶಿರ್ ಸಾವಿಗೀಡಾಗಿದ್ದಾರೆ.
ಮುನೀರ್ (40), ನಯಾಮತ್ (40), ಮುದಶಿರ್ (12), ರಮೀಜಾ ಬೇಗಂ (50), ಸುಮ್ಮಿ (12) ಸ್ಥಳದಲ್ಲಿಯೇ ಸಾವಿಗೀಡಾಗಿದ್ದರೆ, ಇನ್ನೂ 13 ಜನರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಅವರನ್ನು ಭೇಟಿ ಮಾಡಿ ಗಾಯಾಳುಗಳನ್ನು ರಾಯಚೂರು ರಿಮ್ಸ್ ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಲಾಗಿದೆ. ಈ ಕುರಿತು ಸೈದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.