ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ವತಿಯಿಂದ ಸೆ.೧೦ ಮತ್ತು ೧೧ ರಂದು ರಾಜ್ಯ ಮಟ್ಟದ ೯ನೇ ಕನ್ನಡ ಕಲ್ಪಿತ ನ್ಯಾಯಾಲಯ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಕಾನೂನು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ. ಬಸವರಾಜು ಹೇಳಿದರು.
ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸೆ.೧೦ ರಂದು ಬೆಳಿಗ್ಗೆ ೧೦.೩೦ಕ್ಕೆ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಸ್ಪರ್ಧೆಗಳನ್ನು ಉದ್ಘಾಟಿಸುವರು. ಅತಿಥಿಯಾಗಿ ಉಚ್ಚ ನ್ಯಾಯಾಲಯ ನಿವೃತ್ತ ನ್ಯಾಯಮೂರ್ತಿ ಎಚ್. ಬಿಲ್ಲಪ್ಪ ಪಾಲ್ಗೊಳ್ಳುವರು. ನಾನು ಅಧ್ಯಕ್ಷತೆ ವಹಿಸುತ್ತೇನೆ ಎಂದರು.
ಸೆ.೧೧ ರಂದು ಸಂಜೆ ೪.೩೦ಕ್ಕೆ ಸಮಾರೋಪ ಸಮಾರಂಭ ಜರುಗಲಿದ್ದು, ಮುಖ್ಯ ಅತಿಥಿಗಳಾಗಿ ಧಾರವಾಡ ಉಚ್ಚನ್ಯಾಯಾಲಯ ನ್ಯಾಯಮೂರ್ತಿ ರವಿ ಹೊಸಮನಿ, ಜಿ. ಬಸವರಾಜ, ಹಿರಿಯ ವಕೀಲ ಬಸವಪ್ರಭು ಹೊಸಕೇರಿ ಅವರು ಪಾಲ್ಗೊಳ್ಳುವರು. ರಾಜ್ಯಾದ ವಿವಿಧ ಭಾಗಗಳ ೩೬ ತಂಡಗಳು ಕನ್ನಡ ಕಲ್ಪಿತ ನ್ಯಾಯಾಲಯ ಸ್ಪರ್ಧೆಯಲ್ಲಿ ಭಾಗವಹಿಸಲಿವೆ ಎಂದು ಮಾಹಿತಿನ ನೀಡಿದರು.
ಮೌಲ್ಯಮಾಪನ ಕುಲಸಚಿವ ಪ್ರೊ. ಜಿ.ಬಿ. ಪಾಟೀಲ, ಡೀನ್ ಪ್ರೊ. ರತ್ನಾ ಭರಮಗೌಡರ ಗೋಷ್ಠಿಯಲ್ಲಿದ್ದರು.