ಮೈಸೂರು ರೈಲ್ವೆ ನಿಲ್ದಾಣಕ್ಕೆ ಚಾಮರಾಜ ಒಡೆಯರ್ ಹೆಸರು

Advertisement

ಮೈಸೂರು: ಮೈಸೂರು ರೈಲ್ವೆ ನಿಲ್ದಾಣಕ್ಕೆ ಚಾಮರಾಜ ಒಡೆಯರ್ ಹೆಸರು ಇಡಲಾಗುವುದು. ಚಾಮರಾಜ ಒಡೆಯರ್ ಪ್ರತಿಮೆಯನ್ನೂ ಸಹ ಸ್ಥಾಪಿಸಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಮೈಸೂರು ರೈಲ್ವೆ ನಿಲ್ದಾಣದ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ರೈಲ್ವೆ ವಿಭಾಗದ ಅಧಿಕಾರಿಗಳ ಸಭೆ ನಡೆಸಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, ಆಗಸ್ಟ್ 15ಕ್ಕೆ ಅಶೋಕಪುರಂ ರೈಲ್ವೆ ನಿಲ್ದಾಣ ಲೋಕಾರ್ಪಣೆ ಆಗಲಿದೆ. 1870ರಲ್ಲಿ ಮೈಸೂರು ಅರಸರಾಗಿದ್ದ ಚಾಮರಾಜ ಒಡೆಯರ್ ಮೈಸೂರಿಗೆ ರೈಲ್ವೆ ಸೇವೆ ಆರಂಭಿಸಿದರು. ಹೀಗಾಗಿ ಈ ನಿಲ್ದಾಣಕ್ಕೆ ಅವರ ಹೆಸರನ್ನು ಇಡಲಾಗುತ್ತಿದೆ. ಇದು ಮೈಸೂರಿನ ಎರಡನೇ ರೈಲ್ವೆ ನಿಲ್ದಾಣ ಆಗಲಿದ್ದು, ಕೆಲವು ರೈಲುಗಳು ಇಲ್ಲಿಂದ ಹೊರಡಲಿವೆ ಎಂದರು.