ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ ಪ್ರತ್ಯೇಕ ಆ್ಯಪ್‌ಗೆ ಸಚಿವ ಸಂಪುಟ ಅಸ್ತು ಎಂದಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಆ್ಯಪ್ ಬಗ್ಗೆ ಚರ್ಚೆ ನಡೆದಿದ್ದು, ಈ ವೇಳೆ ಸಭೆಯಲ್ಲಿ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕುರಿತು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಪ್ರತ್ಯೇಕ ಆ್ಯಪ್‌ಗೆ ಒಪ್ಪಿಗೆ ನೀಡಿದ್ದು, ಯಾವ ದಿನಾಂಕದಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂಬುದನ್ನು ಕೆಲವೇ ದಿನಗಳಲ್ಲಿ ಹೇಳಲಾಗುವುದು ಆದರೆ ಆಗಸ್ಟ್‌ನಲ್ಲಿ ಗೃಹಿಣಿಯರ ಅಕೌಂಟ್‌ಗೆ 2 ಸಾವಿರ ಜಮಾ ಮಾಡುವುದು ಪಕ್ಕಾ ಎಂದಿದ್ದಾರೆ.