ಬೆಂಗಳೂರು: ಇನ್ನೂ ಸಂಪುಟ ಸಚಿವರೊಬ್ಬರ ಸಾವಿನ ಸೂತಕವೇ ಕಳೆದಿಲ್ಲ, ಜೀವ ಬಿಟ್ಟ ತಮ್ಮದೇ ಪಕ್ಷದ ನಿಷ್ಠಾವಂತ ಕಾರ್ಯಕರ್ತನ ಕುಟುಂಬದ ಕಣ್ಣೀರು ಆರಿಲ್ಲ. ತಮ್ಮವರ ಸಾವುಗಳೇ ಬಿಜೆಪಿಗೆ ಕೊಂಚವೂ ಬೇಸರ ಮೂಡಿಸಿಲ್ಲ ಎಂದಾದರೆ ಜನರ ನೋವಿಗೆ ಮರುಕಪಡುವರೆ..? ಎಂದು ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಅಸಮಧಾನ ಹೊರಹಾಕಿದೆ.
ಭಾರೀ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಜನರ ಸಮಸ್ಯೆ ಆಲಿಸಬೇಕಾದ ಸಚಿವ ಎಂಟಿಬಿ ನಾಗರಾಜ್, ಶಾಸಕ ಎಸ್.ಆರ್ ವಿಶ್ವನಾಥ್, ಸಚಿವ ಮುನಿರತ್ನ ಸಾವಿರಾರು ಕಾರ್ಯಕರ್ತರ ಮುಂದೆ ಕುಣಿದು ಕುಪ್ಪಳಿಸಿದ್ದಾರೆ.