ದೊಡ್ಡಬಳ್ಳಾಪುರ: ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್-ಬಿಜೆಪಿ ಎರಡೂ ಪಕ್ಷಗಳು ಜತೆಗೂಡಿ ಆಡಳಿತ ನಡೆಸಲು ಮುಂದಾಗಿವೆ.
ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯಿತಿ ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಂಗಳಾ ಮಂಜುನಾಥ ಅಧ್ಯಕ್ಷರಾಗಿ ಆಯ್ಕೆಯಾದರೆ, ಬಿಜೆಪಿ ಬೆಂಬಲಿತ ಅಭ್ಯರ್ಥಿ ಪುಷ್ಪಾ ಶಿವಕುಮಾರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.