ಪಾಕಿಸ್ತಾನ: ಪಾಕಿಸ್ತಾನದಲ್ಲಿ ಭೀಕರ ಬಾಂಬ್ ಸ್ಫೋಟ ಸಂಭವಿಸಿ 35ಜನ ಸಾವನ್ನಪ್ಪಿದ್ದು, 150 ಜನ ಗಾಯಗೊಂಡಿದ್ದಾರೆ.
ಪಾಕಿಸ್ತಾನದ ಪ್ರಕ್ಷುಬ್ಧ ಪ್ರದೇಶವಾದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಖರ್ ಎಂಬಲ್ಲಿ ಜಮಿಯತ್ ಉಲೆಮಾ ಇ ಇಸ್ಲಾಂ ಕಾರ್ಯಕರ್ತರ ಸಮಾವೇಶದಲ್ಲಿ ಈ ಬಾಂಬ್ ಸ್ಫೋಟವಾಗಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಜೆಯುಐ-ಎಫ್ ನಾಯಕ ಮೌಲಾನಾ ಜಿಯಾವುಲ್ಲಾ ಜಾನ್ ಸಹ ಸಾವನ್ನಪ್ಪಿದ್ದು, ಹಲವು ಜನ ಪತ್ರಕರ್ತರೂ ಸಹ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.