ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅವಕಾಶ ಕೋರಿ ಹಿಂದು ಮಹಿಳೆಯರು ಸಲ್ಲಿಸಿದ ಅರ್ಜಿಯನ್ನು ವಾರಣಾಸಿ ಜಿಲ್ಲಾ ನ್ಯಾಯಾಲಯ ಪುರಸ್ಕರಿಸಿದ್ದು, ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 22ರಂದು ನಡೆಸಲಾಗುವುದು ಎಂದು ಕೋರ್ಟ್ ತಿಳಿಸಿದೆ.
ಇದೇ ವೇಳೆ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಬೇಕೆಂದು ಐವರು ಹಿಂದು ಮಹಿಳೆಯರು ಉತ್ತರಪ್ರದೇಶದ ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದನ್ನು ಪುರಸ್ಕರಿಸಬಾರದು ಎಂದು ಸಲ್ಲಿಸಲಾಗಿದ್ದ ಮುಸ್ಲಿಂ ಪರ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.