ನವದೆಹಲಿ: ಜಿ20 ಶೃಂಗಸಭೆಯಲ್ಲಿ ಭಾಷಣ ಆರಂಭಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎಲ್ಲಾ ನಾಯಕರನ್ನು ಸ್ವಾಗತಿಸಿದ ಅವರು ಜಿ20 ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೊರೊನಾ ಸಂದರ್ಭದಲ್ಲಿ ಜಾಗತಿಕ ಮಟ್ಟದಲ್ಲಿ ಸಾಕಷ್ಟು ಸಮಸ್ಯೆ ಅನುಭವಿಸುವಂತಾಗಿದೆ. ಕೊರೊನಾದಿಂದ ಅನೇಕ ದೇಶಗಳು ಸಂಕಷ್ಟಕ್ಕೆ ಸಿಲುಕಿದ್ದವು. ಈಗಷ್ಟೆ ಎಲ್ಲಾ ದೇಶಗಳು ಆರ್ಥಿಕವಾಗಿ ಚೇತರಿಕೆ ಕಾಣುತ್ತಿವೆ ಎಂದರು. ಸಬ್ ಕಾ ಸಾತ್, ಸಬ್ ಕಾ ವಿಕಾಸ್ಗೆ ಮಂತ್ರವನ್ನು ಪಠಿಸಬೇಕಿದೆ ಎಂದು ಪ್ರಧಾನಿ ಮೋದಿ, ಭಾರತದ ಅಧ್ಯಕ್ಷತೆ ದೇಶದ ಒಳಗೆ ಮತ್ತು ಹೊರಗೆ ಇದು ಜನರ G20 ಸಭೆಯಾಗಿದೆ. ಜಿ20 ಶೃಂಗಸಭೆಯಲ್ಲಿ ಜಿ20 ಒಕ್ಕೂಟಕ್ಕೆ ಆಫ್ರಿಕನ್ ಒಕ್ಕೂಟ ಸೇರ್ಪಡೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದರು. ಆ ಮೂಲಕ ಜಿ20 ಒಕ್ಕೂಟದ 21ನೇ ದೇಶವಾಗಿ ಆಫ್ರಿಕನ್ ಒಕ್ಕೂಟ ಸೇರ್ಪಡೆಯಾದಂತಾಗಿದೆ.