18ರಂದು ಪೊಲೀಸ್ ಸಾಹಿತ್ಯ ಸಂಭ್ರಮ

ಪೊಲೀಸ್ ಸಾಹಿತ್ಯ
Advertisement

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಾಹಿತಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಇದೇ ತಿಂಗಳ ೧೮ ರಂದು ಪೊಲೀಸ್ ಸಾಹಿತ್ಯ ಸಂಭ್ರಮ-೨೦೨೨ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪೊಲೀಸ್ ಸಾಹಿತ್ಯ ಸಂಭ್ರಮದ ಉಸ್ತುವಾರಿ ನಿವೃತ್ತ ಪೊಲೀಸ್ ಅಧಿಕಾರಿ ಡಾ.ಡಿ.ಸಿ.ರಾಜಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೈಯಲ್ಲಿ ಲಾಠಿ ಹಿಡಿದು ಕಳ್ಳರನ್ನು ಬೆನ್ನಟ್ಟುವ ಅನೇಕ ಖಾಕಿಧಾರಿಗಳು ಪೆನ್ನು ಹಿಡಿದು ಕವಿ ಸಾಹಿತಿಗಳಾಗಿದ್ದು, ಈ ಮೂಲಕ ಇಂಥವರಿಗೆ ಬೆನ್ನು ತಟ್ಟುವ ಕೆಲಸ ಮಾಡಲಾಗುತ್ತದೆ ಎಂದರು.
ನಿಮ್ಹಾನ್ಸ್ ಕನ್ವೆನ್ಷನ್ ಸಭಾಂಗಣದಲ್ಲಿ ನಡೆಯಲಿರುವ ಪೊಲೀಸ್ ಸಾಹಿತ್ಯ ಸಮ್ಮೇಳನವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಉದ್ಘಾಟಿಸಲಿದ್ದು, ಸಾಹಿತಿ ಎಸ್.ಎಲ್.ಭೈರಪ್ಪ, ಡಾ.ಚಂದ್ರಶೇಖರ ಕಂಬಾರ, ನಾಗತಿಹಳ್ಳಿ ಚಂದ್ರಶೇಖರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಸಿ.ಹೆಚ್.ಪ್ರತಾಪ್ ರೆಡ್ಡಿ ಸೇರಿದಂತೆ ಮುಂತಾದವರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು. ಅಂದು ನಡೆಯಲಿರುವ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ಬುಕ್ ಬ್ರಹ್ಮ ಸಂಪಾದಕ ದೇವು ಪತ್ತಾರ್, ಉಷಾ ಪ್ರಸಾದ್, ಸತೀಶ್ ಸೇರಿದಂತೆ ಮೊದಲಾವರು ಇದ್ದರು.