ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲು ಕಲ್ಪಿಸುವ ವಿಧೇಯಕವನ್ನು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಂಡಿಸಿದೆ. ಲೋಕಸಭೆಯಲ್ಲಿ ಮಹಿಳಾ ಮೀಸಲು ವಿಧೇಯಕವನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘ್ವಾಲ್ ಅವರು ಮಂಡಿಸಿದರು. ಹೊಸ ಸಂಸತ್ ಭವನದಲ್ಲಿ ನಡೆದ ಕಲಾಪದಲ್ಲಿ ಮಂಡನೆಯಾದ ಮೊದಲ ವಿಧೇಯಕ ಕೂಡ ಇದಾಗಿದ್ದು, ಈ ವಿಧೇಯಕಕ್ಕೆ ‘ನಾರಿ ಶಕ್ತಿ ವಂದನ್ ಅಧಿನಿಯಮ’ ಎಂದು ಹೆಸರಿಸಿದೆ.