ಬೆಂಗಳೂರು: ನಿಗಮ ಮಂಡಳಿ ನೇಮಕದಲ್ಲಿ ಹೊಸಬರಿಗೆ ಅವಕಾಶ ಇಲ್ಲವೇ ಇಲ್ಲ ಎಂದು ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಮೊದಲೂ ಹೇಳಿದ್ರು ಈಗಲೂ ಅದನ್ನೇ ಹೇಳಿದ್ದಾರೆ. ಮೂರು ನಾಲ್ಕು ಬಾರಿ ಗೆದ್ದವರಿಗೆ ನಿಗಮ ಮಂಡಳಿ ನೀಡಲು ಪಾರ್ಟಿ ಬದ್ದವಾಗಿದೆ ಎಂದಿದ್ದಾರೆ.
ಹೊಸದಾಗಿ ಆಯ್ಕೆಯಾದ ಯಾವೊಬ್ಬ ಶಾಸಕರಿಗೂ ಅವಕಾಶವಿಲ್ಲ. ನಮ್ಮ ಜಿಲ್ಲೆಯಲ್ಲಿ 2-3 ಜನ ಹಿರಿಯ ಶಾಸಕರಿಗೆ ಸ್ಥಾನ ದೊರೆಯಲಿದೆ ಎಂದು ಹೇಳಿದ್ದಾರೆ.